Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸನ : ನಕಲು ಮಾಡಿದ ಆರೋಪಕ್ಕೆ ಕ್ಷಮಾಪಣೆ ಪತ್ರ ಬರೆದುಕೊಡು ಎಂದು ಹೇಳಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ.
ಮೃತ ವಿಧ್ಯಾರ್ಥಿನಿಯನ್ನು ಮೂಲತಃ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಎಂದು ಗುರುತಿಸಲಾಗಿದೆ.

ಈಕೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಓದುತ್ತಿದ್ದಳು. ಇಂದು ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆ ಸಮಯದಲ್ಲಿ ನಕಲು ಮಾಡಿದ್ದಾಗಿ ಆರೋಪಿಸಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು. ಇದಾದ ಬಳಿಕ ವಿದ್ಯಾರ್ಥಿನಿ ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.