Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಪೆಟ್ಟು ನೀಡಿದೆ’- ಹೆಚ್‌ಡಿ ದೇವೇಗೌಡ

ನವದೆಹಲಿ: ಕಾವೇರಿ ನೀರು ನಿರ್ವಹಣಾ  ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಪೆಟ್ಟು ನೀಡಿದೆ. ಬೆಂಗಳೂರಿಗೆ ಕುಡಿಯುವ ನೀರು ಬೇಕಿದೆ, ಮುಂದೇನಾಗುತ್ತೋ ಗೊತ್ತಿಲ್ಲ. ಕಾವೇರಿ ನೀರು ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡ ನಿರ್ಣಯ ದುರಂತ. ಸರ್ಕಾರ ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡಿದೆಯೋ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಎಲ್ಲೋ ಒಂದು ಕಡೆ ಎಡವಿದ್ದೇವೆ ಅನ್ನಿಸುತ್ತೆ. ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾದರೆ ಖಂಡಿಸಿದ್ದೆ. ಧರಣಿ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೆ.

ಇವತ್ತು ಸದನದಲ್ಲಿ ಕಾವೇರಿ ವಿಚಾರ ಎತ್ತಿದ್ದೇನೆ. ಕರ್ನಾಟಕ, ತಮಿಳುನಾಡಿಗೆ ಸಂಬಂಧ ಇಲ್ಲದ ಅಧಿಕಾರನ್ನು ಗ್ರೌಂಡ್​ಗೆ ಕಳುಹಿಸಲಿ. ವಾಸ್ತವಿಕ ವರದಿಯನ್ನು ಅಧಿಕಾರಿಗಳ ತಂಡ ಸಲ್ಲಿಸಲಿ. ನಾವು ಒಪ್ಪಿಕೊಳ್ಳುತ್ತೇವೆ, ಆದರೆ ತಮಿಳುನಾಡು ಒಪ್ಪಿಕೊಳ್ಳುತ್ತಿಲ್ಲ. ತಮಿಳುನಾಡಿನ ರಾಜಕಾರಣಿಗಳಲ್ಲಿ ಒಗ್ಗಟ್ಟು ಇದೆ. ನಮ್ಮಲ್ಲಿ ಒಗ್ಗಟ್ಟು ಇಲ್ಲ ಎಂದರು ವಿಷಾಧ ವ್ಯಕ್ತಪಡಿಸಿದರು.