Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾವೇರಿ ನೀರು ವಿವಾದ- ನಾಳೆ ದೆಹಲಿಯಲ್ಲಿ ಮಹತ್ವದ ಸಭೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರ ಹಾಗೂ ಬರಪರಿಹಾರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ ನಲ್ಲಿ ನಾಳೆ ಬೆಳಗ್ಗೆ ಮಹತ್ವದ ಸಭೆ ಆಯೋಜಿಸಲಾಗಿದೆ.

ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರುಗಳು ,ಲೋಕಸಭಾ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರುಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ .

ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ‌‌.ಕೆ ಶಿವಕುಮಾರ್ ಅವರು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ.

ಕರ್ನಾಟಕದ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಅವರು ಈಗಾಗಲೇ ನವದೆಹಲಿಯಲ್ಲಿ ವಾಸ್ತವ್ಯ ಹೊಡಿದ್ದು ನಾಳೆ ನಡೆಯಲಿರುವ ಮಹತ್ವದ ಸಭೆಗೆ ಕರ್ನಾಟಕ ಭವನದಲ್ಲಿ ಪೂರ್ವಭಾವಿ ಚರ್ಚೆ ಮಾಡಲಿದ್ದಾರೆ.