Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

ಬೆಂಗಳೂರು: ಮಳೆ ಅಭಾವದಿಂದ ನೀರಿಲ್ಲದೆ ರೈತರು ಕಂಗಾಗಲಾಗಿದ್ದರೆ. ಇದರ ಮಧ್ಯೆ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್​ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ.

ಇದರಿಂದ ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಜೋರಾಗಿದೆ.

ಇದರ ಮಧ್ಯೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾವೇರಿ ನದಿ ನೀರು ವಿವಾದದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.