ಕಾಶ್ಮೀರದಲ್ಲಿ ನಾಪತ್ತೆಯಾಗಿದ್ದ ಯೋಧ ಪತ್ತೆ – ಪೊಲೀಸರಿಂದ ವಿಚಾರಣೆ
ಕುಲ್ಗಾಮ್: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಿಂದ ನಾಪತ್ತೆಯಾಗಿದ್ದ ಯೋಧರೊಬ್ಬರು ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಕಳೆದ ವಾರ ಇವರು ಕಾಣೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದರು. ಲಡಾಖ್‌ನಲ್ಲಿ ನಿಯೋಜನೆಗೊಂಡಿದ್ದ ಜಾವೈದ್ ಅಹ್ಮದ್ ವಾನಿ ರಜೆಯ ಮೇಲೆ ಶನಿವಾರ ತಮ್ಮ ಸ್ಥಳೀಯ ಕುಲ್ಗಾಮ್ ಜಿಲ್ಲೆ ಬಂದಿದ್ದಾಗ ನಾಪತ್ತೆಯಾಗಿದ್ದರು. “ನಾಪತ್ತೆಯಾಗಿದ್ದ ಸೇನಾ ಯೋಧನನ್ನು ಕುಲ್ಗಾಮ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈದ್ಯಕೀಯ ತಪಾಸಣೆಯ ನಂತರ ಜಂಟಿ ವಿಚಾರಣೆ ಆರಂಭವಾಗಲಿದೆ. ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು” ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.