Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಕುಮಾರಸ್ವಾಮಿ ಆಗಲಿ, ಬಿಜೆಪಿಯವರಾಗಲಿ ಆದಾಯ ತೆರಿಗೆ ಪ್ರತಿನಿಧಿಗಳೇನು ಅಲ್ಲ’- ಡಿಕೆಶಿ

ಬೆಂಗಳೂರು: ಕುಮಾರಸ್ವಾಮಿ, ಬಿಜೆಪಿ ನಾಯಕರಾಗಲಿ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಐಟಿ ದಾಳಿ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡುತ್ತಿರುವ ಆರೋಪದ ಬಗ್ಗೆ ಮಾತನಾಡಿದ ಅವರು “ಯಾರು ಏನು ಆರೋಪ ಮಾಡುತ್ತಾರೋ ಮಾಡಲಿ. ಆದಾಯ ಇಲಾಖೆ ಅಧಿಕಾರಿಗಳ ದಾಳಿ, ತನಿಖೆ ಮುಗಿದ ನಂತರ ತಮ್ಮ ಹೇಳಿಕೆಯನ್ನು ಪ್ರಕಟಿಸಲಿ. ಆನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ನನ್ನ ವಿರುದ್ಧ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಆಗಲಿ, ಬಿಜೆಪಿ ನಾಯಕರಾಗಲಿ ಆದಾಯ ಇಲಾಖೆ ಪ್ರತಿನಿಧಿಗಳೇನೂ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರ ಕಾಲದಲ್ಲಿ ಏನಾಯ್ತು ಆಗ ಅವರಿಗೆ ಏನು ಸಿಕ್ಕಿದೆ? ಎಲ್ಲವೂ ದಾಖಲೆಗಳಲ್ಲಿ ಇವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಬಿಡುಗಡೆ ಮಾಡಿದ ನಂತರ ಮಾತನಾಡೋಣ” ಎಂದರು.