Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ’ – ಸಿ.ಟಿ.ರವಿ ಮನವಿ

ಚಿಕ್ಕಮಗಳೂರು: ಯಾರೂ ಎಲೆಕ್ಷನ್ ಟೈಂ ಹಿಂದೂಗಳಾಗಬಾರದು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು, ಮುಂದಕ್ಕೆ ನೋಡಬೇಕು. ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಮಾಜಿ ಶಾಸಕ ಸಿ.ಟಿ.ರವಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹಿಂದೂ ಎಂದು ಹೇಳಿಕೊಳ್ಳಲು ಗರ್ವ ಪಡಬೇಕು. ಸಮಾಜ ಇದನ್ನೇ ಕೇಳೋದು. ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ. ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ಸಿದ್ರಾಮ ಇದ್ದಾನೆ ಎಂದಿದ್ದಾರೆ ಎಂದರು.

ಇನ್ನು ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ. ನೀವು ಮಾಲೆ ಹಾಕಿದ ಮೇಲೆ ಜಮೀರ್ ಅವರು ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ. ಸತ್ಯವನ್ನು ಎತ್ತಿ ಹಿಡಿದಂತಾಗುತ್ತೆ ಎಂದು ಹೇಳಿದ್ದಾರೆ.