Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ನಡುವೆ ಭೀಕರ ಅಪಘಾತ: ಐವರು ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ.

ಭೀಕರ ಅಪಘಾತದಲ್ಲಿ ಸಾರಿಗೆ ಬಸ್ಸಿನಲ್ಲಿದ್ದ ರಾಯಚೂರಿನ ಮಾಬಮ್ಮ(35), ಬೆಂಗಳೂರು ಮೂಲದ ಪಾರ್ವತಮ್ಮ (45), ಮಸ್ಕಿ ಮೂಲದ (40) ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಐವರಿಗೆ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ರಾಯಚೂರಿನಿಂದ ಬೆಂಗಳೂರಿನತ್ತ ಬರುತ್ತಿತ್ತು.

ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.