Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೆನಡಾ ಓಪನ್ ಗೆದ್ದು ಚಾಂಪಿಯನ್ ಪಟ್ಟಕ್ಕೇರಿದ ಲಕ್ಷ್ಯ ಸೇನ್

ಕ್ಯಾಲ್ಗರಿ: ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಭಾರತೀಯ ಶಟ್ಲರ್ ಲಕ್ಷ್ಯ ಸೇನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ.

ಭಾರತದ ಯುವ ಬ್ಯಾಡ್ಮಿಂಟನ್‌ ಆಟಗಾರ ಲಕ್ಷ್ಯ ಸೇನ್‌ ಅವರು ಕೆನಡಾ ಓಪನ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ – ಏರ್ ಲಿಫ್ಟ್

ಕೆನಡಾದ ಕ್ಯಾಲ್ಗರಿಯಲ್ಲಿ ನಡೆದ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಫೈನಲ್‌ನಲ್ಲಿ ಚೀನಾದ ಲಿ ಶಿ ಫೆಂಗ್‌ ಅವರನ್ನು 21-18, 22-20 ನೇರ ಸೆಟ್‌ಗಳಿಂದ ಸೋಲಿಸಿ ಗೆಲುವು ದಾಖಲಿಸಿದ್ದಾರೆ. ಇದರೊಂದಿಗೆ ಲಕ್ಷ್ಯಸೇನ್‌ 2ನೇ ಬಾರಿಗೆ ಬಿಡಬ್ಲ್ಯುಎಫ್‌ ವರ್ಲ್ಡ್‌ ಟೂರ್‌ ಚಾಂಪಿಯನ್‌ ಎನಿಸಿಕೊಂಡಿದ್ದಾರೆ.