Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೆ.ನಾಗರಾಜ್‍ಗೆ ಪಿಹೆಚ್‍ಡಿ ಪದವಿ

 

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದ, ದಾವಣಗೆರೆ ಪಶುರೋಗ ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ನಾಗರಾಜ್ ಅವರಿಗೆ ಬೀದರ್‍ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪಿಹೆಚ್‍ಡಿ ಪದವಿ ನೀಡಿದೆ.

ಪ್ರಾಧ್ಯಾಪಕ ಡಾ.ಜಗದೀಶ್ ಎಸ್ ಸಂಗನಾಳ್ ಮಾರ್ಗದರ್ಶನದಲ್ಲಿ ಪಶುವೈದ್ಯಕೀಯ ಔಷಧ ಮತ್ತು ವಿಷಶಾಸ್ತ್ರದಲ್ಲಿ “ಬರಡು ರಾಸುಗಳಲ್ಲಿ ಕೃತಕ ಚಿಕಿತ್ಸೆಯಿಂದ ಹಾಲು ಬರಸುವಿಕೆ” ಮಹಾಪ್ರಬಂಧಕ್ಕೆ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪಿಹೆಚ್‍ಡಿ ಪದವಿ ನೀಡಿದೆ.