ಕೆ.ಪಿ.ಎಸ್.ಸಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ
ಯಾದಗಿರಿ: ಇಂದು ರಾಜ್ಯಾದ್ಯಂತ ನಡೆಯುತ್ತಿರುವ ವಿವಿಧ ಇಲಾಖೆಯ ಕೆ.ಪಿ.ಎಸ್.ಸಿ ನಡೆಸುತ್ತಿರುವ ಎಸ್.ಡಿ.ಎ ಮತ್ತು ಎಫ್.ಡಿ.ಎ ಪರೀಕ್ಷೆಯಲ್ಲಿ ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆ ಪರೀಕ್ಷಾ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯಾದಗಿರಿ ಜಿಲ್ಲಾದ್ಯಂತ 17 ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಾಮಾನ್ಯ ಪರೀಕ್ಷೆಯು ಇಂದು ನಗರದಲ್ಲಿ ಬೆಳಿಗ್ಗೆ ಪ್ರಾರಂಭವಾಗಿತ್ತು. ಮೊದಲ ಪೇಪರ್ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿರುವ ಶಂಕೆಯ ಮೇರೆಗೆ ಯಾದಗಿರಿ ನಗರ ಪೋಲಿಸರು ಓರ್ವ ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಘಟನೆಯ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ವಿಚಾರಣೆ ಮುಗಿದ ನಂತರ ತಿಳಿಸಲಾಗುವುದು ಎಂದು ಪೋಲಿಸ್ ವರಿಷ್ಠಾಧಿಕಾರಿ ಸಂಗೀತಾ ತಿಳಿಸಿದ್ದಾರೆ.