Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೆ-ಸೆಟ್ ಪರೀಕ್ಷೆ ಜ.13ಕ್ಕೆ ನಿಗದಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಲುವಾಗಿ ನಡೆಸುವ ಅರ್ಹತಾ ಪರೀಕ್ಷೆಯನ್ನು ಡಿ.31ರ ಬದಲಿಗೆ ಜನವರಿ‌ 13ರಂದು ನಡೆಸಲಾಗುವುದು ಎಂದು  ತಿಳಿಸಿದೆ.

ಡಿ.31ರ ಬದಲಿಗೆ ಜ.೧೩ ರಂದು ನಡೆಸಲಾಗುವುದು ಎಂದು ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ , ಕಲ್ಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳನ್ನು ತಮ್ಮ ಪರೀಕ್ಷಾ ಕೇಂದ್ರಗಳಾಗಿ ಆಯ್ಕೆ‌ ಮಾಡಿಕೊಂಡಿದ್ದ ಅಭ್ಯರ್ಥಿಗಳು ಕ್ರಮವಾಗಿ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಧಾರವಾಡ ಜಿಲ್ಲಾ‌ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿಯಾಗಿ ಹಾವೇರಿ ಮತ್ತು ಮೈಸೂರು ಜಿಲ್ಲಾ ಕೇಂದ್ರಗಳಿಗೆ ಮಂಡ್ಯ ಪರೀಕ್ಷಾ ಕೇಂದ್ರಗಳನ್ನು ಸೇರಿಸಲಾಗಿದೆ. ಇವು ಬಿಟ್ಟು ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ ಎಂದು ನಿದೇರ್ಶನ ನೀಡಿದ್ದಾರೆ.