ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಶಾಮನೂರು ಒತ್ತಾಯ.!
ದಾವಣಗೆರೆ: ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಒಳ್ಳೆಯದಾಗಲೆಂದು ಹೋರಾಟ ಮಾಡ್ತಿದ್ದಾರೆ. ಪಂಚಮಸಾಲಿ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಲಿದ್ದೇವೆ ಎಂದು ಹೇಳಿದ್ದಾರೆ.
ಡಿಸೆಂಬರ್ 23, 24 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಎರಡು ಲಕ್ಷ ಜನರು ಸೇರಲಿದ್ದಾರೆ. ವೀರಶೈವ ಲಿಂಗಾಯತ ಸಮಾವೇಶದಲ್ಲಿ ಚರ್ಚೆ ಮಾಡುತ್ತೇವೆ ಎಂದು ಶಾಮನೂರು ತಿಳಿಸಿದ್ದಾರೆ.