Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೇರಳ ಸಿಎಂ ಪಿಣರಾಯ್‌ಗೆ ಬೆದರಿಕೆ ಕರೆ

ಕೇರಳ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ರಾಜ್ಯ ಪೊಲೀಸ್‌ ಪ್ರಧಾನ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬುಧವಾರ ಸಂಜೆ ಪೊಲೀಸ್ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಗೆ ದೂರವಾಣಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ.

ವರದಿಯ ಪ್ರಕಾರ ಸಿಎಂಗೆ ಅಪ್ರಾಪ್ತ ಬಾಲಕನೋರ್ವ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಬಾಲಕನ ಮನೆಗೆ ಭೇಟಿ ನೀಡಿ ಪಾಲಕರನ್ನು ವಿಚಾರಿಸಿದ್ದಾರೆ. ತಮ್ಮ ಮಗನಿಗೆ ಏನೂ ತಿಳಿದಿಲ್ಲ ಮೊಬೈಲ್‌ ಫೋನ್‌ ಬಳಸುತ್ತಿದ್ದಾಗ ಆಕಸ್ಮಿಕವಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಹೋಗಿದೆ ಎಂದಿದ್ದಾರೆ.

ಈ ಬಗ್ಗೆ ಪಾಲಕರ ಹೇಳಿಕೆ ತೃಪ್ತಿದಾಯಕವಾಗಿಲ್ಲ, ಹೀಗಾಗಿ ತನಿಖೆಯನ್ನು ಎಲ್ಲಾ ಆಯಾಮಗಳಿಂದ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆಯ ವೇಳೆ ಬೆದರಿಕೆ ಕರೆ ಬಂದಿದ್ದು, ಕೇರಳ ಸಿಎಂಗೆ ಕೊಲೆ ಬೆದರಿಕೆ ಹಾಕಿದ ಬಾಲಕ ಕೊಚ್ಚಿಯಲ್ಲಿ 7ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಬಾಲಕನಿಗೆ ಕೌನ್ಸಿಲಿಂಗ್‌ ನಡೆಸಲಾಗುತ್ತಿದೆ. ಬಾಲಕ ಬೆದರಿಕೆ ಕರೆ ಮಾಡಲು ಪ್ರೇರಣೆ ಏನು ಎಂಬ ಬಗ್ಗೆ ಪೊಲೀಸರು ತನಿಖೆಯನ್ನು ನಡೆಸಲಾಗುತ್ತಿದೆ.