“ಕೈ” ಹಿಡಿಯಲಿದ್ದಾರೆ ವಿ. ಸೋಮಣ್ಣ, ಅರವಿಂದ ಲಿಂಬಾವಳಿ – ಹೊಸ ಬಾಂಬ್ ಸಿಡಿಸಿದ ಗೃಹ ಸಚಿವ ಪರಮೇಶ್ವರ್
ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ಗೆ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆ, ಗೃಹ ಸಚಿವ ಜಿ ಪರಮೇಶ್ವರ ಹೊಸ ಬಾಂಬ್ ಸಿಡಿಸಿದ್ದಾರೆ.
ಅತೃಪ್ತ ಬಿಜೆಪಿ ನಾಯಕರಾದ ವಿ ಸೋಮಣ್ಣ ಮತ್ತು ಅರವಿಂದ ಲಿಂಬಾವಳಿ ಹಳೆಯ ಪಕ್ಷಕ್ಕೆ ಹತ್ತಿರವಾಗುತ್ತಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟಿದ್ದಾರೆ. ಬಿಜೆಪಿಯ ಹಿರಿಯ ನಾಯಕರು ಕಾಂಗ್ರೆಸ್ ಸೇರುವ ಕುರಿತು ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಸೋಮಣ್ಣ ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಿದ್ದಾರೆ, ಡಿಸೆಂಬರ್ 6ರಂದು ನಡೆಯುವ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆ ಎಂದರು.