ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಡಿಕೇರಿ: ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಗ್ರೇಡ್-3 ವೃಂದದ 01 ಹಿಂಬಾಕಿ (ಬ್ಯಾಕ್‍ಲಾಗ್) ಹುದ್ದೆ ಸೇರಿದಂತೆ ಒಟ್ಟು 2 ಹುದ್ದೆಗಳು, ಬೆರಳಚ್ಚುಗಾರರ ವೃಂದದ 17 ಹುದ್ದೆಗಳು, ನಕಲು-ಬೆರಳಚ್ಚುಗಾರರ ವೃಂದದ 07 ಹುದ್ದೆಗಳು, ಆದೇಶಿಕ ಜಾರಿಕಾರ ವೃಂದದ 8 ಹುದ್ದೆಗಳು ಹಾಗೂ ಜವಾನ/ ಸೇವಕ ವೃಂದದ 30 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://kodagu.dcourts.gov.in/notice-category/recruitments/ ರಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಡಿಸೆಂಬರ್, 10 ರ ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಮತ್ತು ಪೂರ್ಣ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿಸಲು ಡಿಸೆಂಬರ್, 11 ಕೊನೆಯ ದಿನವಾಗಿದೆ. ಆನ್‍ಲೈನ್ ಹೊರತುಪಡಿಸಿ, ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಮಡಿಕೇರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಸಿ.ಶಾಮ್ ಪ್ರಸಾದ್ ಅವರು ತಿಳಿಸಿದ್ದಾರೆ