ಕೋಟ ಶ್ರೀನಿವಾಸ್ ಪೂಜಾರಿಗೆ ಹಿಂದಿ, ಇಂಗ್ಲಿಷ್ ಬರಲ್ಲ ಗೆಲ್ಲಿಸಬೇಡಿ.!
ಬೆಂಗಳೂರು: ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಗೆ ಹಿಂದಿ, ಇಂಗ್ಲಿಷ್ ಬರಲ್ಲ. ಅವರನ್ನು ಗೆಲ್ಲಿಸಬೇಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಕಿಡಿಕಾರಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ, ಕೇಂದ್ರ ಸರ್ಕಾರದ ಅಧಿಕಾರಿಗಳ ಜೊತೆ ಮಾತನಾಡಬೇಕಾಗುತ್ತದೆ. ಹಿಂದಿ ಅಥವಾ ಇಂಗ್ಲಿಷ್ ಬರದೇ ಲೋಕಸಭೆಯಲ್ಲಿ ವ್ಯವಹಾರ ಕಷ್ಟ ಸಾಧ್ಯ. ಭಾಷೆಯ ಸಮಸ್ಯೆಯಾದರೆ ಕಚೇರಿ ವ್ಯವಹಾರಗಳಲ್ಲಿ ಸಮಸ್ಯೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.!