ಕ್ಯಾಂಡಲ್ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕುತ್ತಿದ್ದ ಬಾಲಕಿ ಬೆಂಕಿಗೆ ಬಲಿ
ತುಮಕೂರು:ಕ್ಯಾಂಡಲ್ ಹಿಡಿದುಕೊಂಡು ಬೈಕ್ಗೆ ಪೆಟ್ರೋಲ್ ಹಾಕುವಾಗ ಪೆಟ್ರೊಲ್ ಬಾಟಲ್ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೌಂದರ್ಯ (16) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕುಣಿಗಲ್ ತಾಲೂಕು ಎಡೆಯೂರು ಹೋಬಳಿಯ ಕಟ್ಟಿಗೇಹಳ್ಳಿ ಗ್ರಾಮದ ಸೌಂದರ್ಯ ಪಟ್ಟಣದ ಮಹಾತ್ಮ ಗಾಂಧಿ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ಓದುತ್ತಿದ್ದಳು.
ಡಿ. 9 ರಂದು ಮನೆಯ ಅಂಗಡಿಯಲ್ಲಿ ವಿದ್ಯುತ್ ಇಲ್ಲದಾಗ ಮೊಂಬತ್ತಿ ಹಚ್ಚಿ ಇಡಲಾಗಿತ್ತು. ಎದುರಿನಲ್ಲಿಯೇ ಬೈಕ್ಗೆ ಪೆಟ್ರೋಲ್ ಹಾಕುವಾಗ ವಿದ್ಯುತ್ ಬಂದಾಗ ಗಾಬರಿಗೊಂಡ ಸೌಂದರ್ಯ ಪೆಟ್ರೋಲ್ ಬಾಟಲಿ ಕೈ ಬಿಟ್ಟಿದ್ದಾರೆ ಈ ವೇಳೆ ಬಾಟಲಿಗೆ ಬೆಂಕಿ ತಗುಲಿ ಬಾಟಲಿ ಸ್ಪೋಟಗೊಂಡಿದೆ.
ಗಾಯಗೊಂಡಿದ್ದ ಸೌಂದರ್ಯಳನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸೌಂದರ್ಯ ಮೃತಪಟ್ಟಿದ್ದು, ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.