Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕ್ಯಾಥೆ ಪೆಸಿಫಿಕ್ ವಿಮಾನದ ಟೈರ್ ಸ್ಫೋಟ – 11 ಮಂದಿಗೆ ಗಾಯ

ಹಾಂಕ್​ಕಾಂಗ್​: ಹಾಂಕ್​ಕಾಂಗ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಥೆ ಪೆಸಿಫಿಕ್ ವಿಮಾನದ ಟೈರ್ ಸ್ಫೋಟಗೊಂಡ ಪರಿಣಾಮ 11 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ಹಾಂಗ್​ಕಾಂಗ್​ನಿಂದ ಲಾಸ್​ ಏಂಜಲೀಸ್​ಗೆ ಹೊರಟಿದ್ದ ವಿಮಾನದಲ್ಲಿ 17 ಸಿಬ್ಬಂದಿ ಹಾಗೂ 293 ಪ್ರಯಾಣಿಕರಿದ್ದರು.

ಇನ್ನು ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಈ ಪೈಕಿ 9 ಮಂದಿಯನ್ನು ಡಿಸ್ಚಾರ್ಜ್​ ಮಾಡಲಾಗಿದೆ ಎಂದು ವರದಿಯಾಗಿದೆ.