ಕ್ರಿಕೆಟ್ ಜೆರ್ಸಿಯಲ್ಲೂ ಕೇಸರಿ – ಕೇಂದ್ರ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ
ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ತಂಡದ ಅಭ್ಯಾಸ ಜೆರ್ಸಿಯ ಬಣ್ಣ ಕೇಸರಿ ಮಾಡಿರುವುದದನ್ನು ಇದೊಂದು ಕೇಂದ್ರ ಸರಕಾರದ ರಾಜಕೀಯ ನಡೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬಾನ್ಯರ್ಜಿ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಅತ್ಯಂತ ಜನಪ್ರಿಯ ಕ್ರೀಡೆಯನ್ನು ಕೇಸರಿಮಯಗೊಳಿಸಲು ಹೊರಟಿದೆ ಎಂದು ಆರೋಪಿಸಿದ್ದಾರೆ.
ಇನ್ನು ನಮ್ಮ ಭಾರತೀಯ ಆಟಗಾರರ ಬಗ್ಗೆ ನಮಗೆ ಹೆಮ್ಮೆಯಿದೆ ಮತ್ತು ಅವರು ವಿಶ್ವಕಪ್ನಲ್ಲಿ ವಿಜೇತರಾಗುತ್ತಾರೆ ಎಂಬ ವಿಶ್ವಾಸವಿದೆ, ಆದರೆ ಬಿಜೆಪಿ ಅಲ್ಲಿಯೂ ಕೇಸರಿ ಬಣ್ಣದ ಜೆರ್ಸಿಯಲ್ಲಿ ಅಭ್ಯಾಸ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ ಮೆಟ್ರೋ ನಿಲ್ದಾಣಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ. ಇದು ಸ್ವೀಕಾರಾರ್ಹವಲ್ಲ ಎಂದಿದ್ದಾರೆ.