ಖ್ಯಾತ ಸಂಗೀತ ಮಾಂತ್ರಿಕ ಇಳಯರಾಜ ಪುತ್ರಿ ನಿಧನ
ಚೆನೈ: ಖ್ಯಾತ ಗಾಯಕ ಮತ್ತು ಸಂಗೀತ ಸಂಯೋಜಕ ಇಳಯರಾಜ ಅವರ ಪುತ್ರಿ ಹಿನ್ನೆಲೆ ಗಾಯಕಿ ಭವತಾರಿಣಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಭವತಾರಿಣಿ ಅವರು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಲಂಕಾಕ್ಕೆ ಹೋಗಿದ್ದರು. ಜನವರಿ 25 ರಂದು ಸಂಜೆ 5 ಗಂಟೆಗೆ ಶ್ರೀಲಂಕಾದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ಅವರ ಪಾರ್ಥಿವ ಶರೀರವನ್ನು ಚೆನ್ನೈಗೆ ತರಲಾಗುತ್ತಿದ್ದು, ಅಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ವರದಿಯಾಗಿದೆ.
ಇನ್ನು ಭವತಾರಿಣಿ ಅವರು ಭಾರತಿ ಚಿತ್ರದ ಮಾಯಿಲ್ ಪೋಲ ಪೊನ್ನು ಒಣ್ಣು ಎಂಬ ತಮಿಳು ಗೀತೆಗಾಗಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ.