Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್(57)ಹಠಾತ್ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಸಾಹಸ ನಿರ್ದೇಶನ ಮಾಡಿದ್ದ ಜಾಲಿ ಅವರಿಗೆ 57 ವರ್ಷ ವಯಸ್ಸಾಗಿತ್ತು.

‘ಪ್ರೇಮಲೋಕ’ ‘ಮಾಸ್ಟರ್​ ಪೀಸ್’ ಸೇರಿ ನೂರಾರು ಸಿನಿಮಾಗಳಿಗೆ ಅವರು ಸ್ಟಂಟ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು.ಒಂದು ಕಾಲಕ್ಕೆ ಅತಿಹೆಚ್ಚು ಸಂಭಾವನೆ ಪಡೆಯೋ ಸಾಹಸ ನಿರ್ದೇಶಕ ಎಂಬ ಹೆಗ್ಗಳಿಕೆಗೆ ಜಾಲಿ ಬಾಸ್ಟಿನ್ ಪಾತ್ರರಾಗಿದ್ದರು

1966ರಲ್ಲಿ ಕೇರಳದ ಅಲೆಪ್ಪೆಯಲ್ಲಿ ಹುಟ್ಟಿದ ಜಾಲಿ ಬೆಳೆದಿದ್ದು ಬೆಂಗಳೂರಿನಲ್ಲಿ. ಅವರು ಬೆಂಗಳೂರಿನಲ್ಲೇ ಶಿಕ್ಷಣ ಪಡೆದರು. ಬೈಕ್ ಮೆಕಾನಿಕ್ ಆಗಿ ಜಾಲಿ ಬಾಸ್ಟಿನ್ ವೃತ್ತಿ ಆರಂಭಿಸಿದರು. ಅವರನ್ನು ಗುರುತಿಸಿದ ಕೆಲವರು ಸ್ಟಂಟ್​ಮನ್ ಆಗಿ ಚಿತ್ರರಂಗಕ್ಕೆ ಪರಿಚಯಿಸಿದರು. ‘ಪ್ರೇಮಲೋಕ’ ಚಿತ್ರದಲ್ಲಿ ರವಿಚಂದ್ರನ್ ಅವರಿಗೆ ಡ್ಯೂಪ್ ಹಾಕಿದರು. ಆಗ ಅವರಿಗೆ 17 ವರ್ಷ ವಯಸ್ಸಾಗಿತ್ತು.

ಸಾಹಸ ಕಲಾವಿದನಾಗಿ, ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ ಜಾಲಿ ಅವರು ಈವರೆಗೆ 900ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.