ಗರ್ಭಕಂಠದ ಕ್ಯಾನ್ಸರ್ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ: ಮಹತ್ವದ ಘೋಷಣೆ
ನವದೆಹಲಿ: ಭವಿಷ್ಯದಲ್ಲಿ ಕಾಣಿಸಿಕೊಳ್ಳಬಹುದಾದ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 9-14 ವರ್ಷ ವಯಸ್ಸಿನ ಹದಿಹರೆಯದವರಿಗೆ ಕೇಂದ್ರ ಸರ್ಕಾರವು ಉಚಿವಾಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಇಂದು ಬಜೆಟ್ ಮಂಡಿಸಿ ಭಾಷಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ.
ಪ್ರಪಂಚದಮೂರನೇ ಅತಿ ಸಾಮಾನ್ಯ ಎನಿಸಿರುವ ಗರ್ಭಕಂಠ ಕ್ಯಾನ್ಸರ್ ತಡೆಯಲು ಹ್ಯೂಮನ್ ಪಪಿಲೋಮಾ ವೈರಸ್ (HPV) ಲಸಿಕೆ ಪರಿಣಾಮಕಾರಿಯಾಗಿದೆ. ಭಾರತ ಸರ್ಕಾರದ ವತಿಯಿಂದ ಇನ್ಮುಂದೆ 9-14 ವರ್ಷದ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ.
ಮುಂದಿನ ಮೂರು ವರ್ಷಗಳಲ್ಲಿ ಸರ್ಕಾರದ ಕಾರ್ಯಕ್ರಮದಡಿಯಲ್ಲಿ ಭಾರತದಾದ್ಯಂತ 9 ರಿಂದ 14 ವರ್ಷ ವಯಸ್ಸಿನ ಹುಡುಗಿಯರಿಗೆ ಮೂರು ಹಂತಗಳಲ್ಲಿ ಉಚಿತವಾಗಿ ಲಸಿಕೆ ನೀಡುವ ಸಾಧ್ಯತೆ ಇದೆ