ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ: 405 ಗ್ರಾಂ ವಶ.!
ಕೊಪ್ಪಳ: ಹುಲಿಗಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ವಿರುದ್ಧ ಪೊಲೀಸರು ದಾಳಿ ನಡೆಸಿ ಎಫ್ಐಆರ್ ದಾಖಲಿಸಿದ್ದಾರೆ.
ದಾಳಿಯಲ್ಲಿ 405 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಹುಲಿಗಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಹುಲಿಗಿಯ ದರ್ಶನಕುಮಾರ ಹೊಸಮನಿ ಹಾಗೂ ವಿಜಯನಗರ ಜಿಲ್ಲೆಯ ಚಿಲಕಣಕಟ್ಟಿ ಗ್ರಾಮದ ಮಂಜುನಾಥ ಎಂಬುವವರನ್ನು ಬಂಧಿಸಲಾಗಿದೆ. ಬಿಹಾರಿ ಮೂಲದ ವ್ಯಕ್ತಿಯೊಬ್ಬರ ವಿರುದ್ದವೂ ದೂರು ದಾಖಲಾಗಿದೆ, ವಿವರ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.