Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆ

 

ಹೊಸಪೇಟೆ: ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ಅರ್ಹ ಕಾರ್ಮಿಕರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಡಂಬಾಳ್ ತಿಳಿಸಿದ್ದಾರೆ.

ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತಗೊಂಡ ಕಾರ್ಮಿಕರಿಗೆ ಅಪಘಾತ ಪರಿಹಾರ ಒದಗಿಸುವ ಸಂಬAಧ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು `ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ’ಯನ್ನು ಜಾರಿಗೆ ತಂದಿದ್ದು, ಎಲ್ಲಾ ಅರ್ಹ ಗಿಗ್ ಕಾರ್ಮಿಕರಾದ ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್‌ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು ಸೇವಾಸಿಂಧು ಪೋರ್ಟಲ್  https://sevasindhuservices.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬೇಕು.

ಯೋಜನೆಯ ಸೌಲಭ್ಯಗಳು: ಗಿಗ್ ಕಾರ್ಮಿಕರು ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ.2 ಲಕ್ಷ ಹಾಗೂ ಜೀವ ವಿಮೆ ರೂ.2 ಲಕ್ಷ ಸೇರಿ ಒಟ್ಟು ರೂ.4 ಲಕ್ಷಗಳು. ಅಪಘಾದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷಗಳವರೆಗೆ. ಆಸ್ಪತ್ರೆ ವೆಚ್ಚ ಮರುಪಾವತಿ ರೂ.1 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ) ಜೀವ ವಿಮಾ ರೂ.2 ಲಕ್ಷಗಳ ಸೌಲಭ್ಯ ಸಿಗಲಿದೆ.

ಈ ಸೌಲಭ್ಯವು ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರಿಗೆ ಮಾತ್ರ ಆಗಿದ್ದು, ಅರ್ಹ ಗಿಗ್ ಕಾರ್ಮಿಕರು 18 ರಿಂದ 60 ವರ್ಷದೊಳಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು. ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯು ಆಧಾರ್ ಲಿಂಕ್ ಆಗಿರಬೇಕು. ವೃತ್ತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ. ಉದ್ಯೋಗ ಪ್ರಮಾಣ ಪತ್ರ, ಇ-ಶ್ರಮ್ ನೋಂದಣಿ ಸಂಖ್ಯೆ (ಇಲ್ಲ ವಾದಲ್ಲಿ  eshram.gov.in  ಅಲ್ಲಿ ನೋಂದಾಯಿಸಿ  ಪಡೆದುಕೊಳ್ಳುವುದು).

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ, ಕಚೇರಿ/ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರುಗಳ ಕಚೇರಿ, ಕಾರ್ಮಿಕ ಸಹಾಯವಾಣಿ 155214 ಸಂಪರ್ಕಿಸಬಹುದು.