ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ನೋಂದಾಣಿಗೆ ಅವಕಾಶ
ದಾವಣಗೆರೆ, ಕಾರ್ಮಿಕ ಇಲಾಖೆ ವತಿಯಿಂದ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ನೀಡಲು ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಸೌಲಭ್ಯಕ್ಕಾಗಿ ಗಿಗ್ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗಿಗ್ ಕಾರ್ಮಿಕರಾದ ಸ್ವಿಗ್ಗಿ, ಜ್ಹೊಮ್ಯಾಟೋ, ಅಮೇಜಾನ್, ಬಿಗ್ ಬಾಸ್ಕೆಟ್, ಪ್ಲಿಪ್ ಕಾರ್ಟ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ, ಅರೆಕಾಲಿಕ ಡೆಲಿವರಿ ನೌಕರರು ಸೇವಾ ಸಿಂಧು ತಂತ್ರಾಂಶ, ಪೋರ್ಟಲ್ ಮೂಲಕ ಅಥವಾ ಕಾರ್ಮಿಕ ಇಲಾಖೆÀ ಕಛೇರಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಕಾರ್ಮಿಕ ನಿರೀಕ್ಷಕರು, ಹರಿಹರ, ಹೊನ್ನಾಳಿ, ಚನ್ನಗಿರಿ, ಜಗಳೂರು ಮತ್ತು ನ್ಯಾಮತಿಯ ಕಾರ್ಮಿಕ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್ ತಿಳಿಸಿದ್ದಾರೆ.