Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕವಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು ‘ ಗೃಹಜ್ಯೋತಿ ನೋಂದಣಿಗೆ ಕೊನೆ ದಿನಾಂಕ ಇಲ್ಲವಾದರೂ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಬರುವ ಜುಲೈ ತಿಂಗಳ ವಿದ್ಯುತ್ ಬಳಕೆಯ ಬಿಲ್ ಝೀರೋ ಬರಬೇಕಾದರೆ ಅದಕ್ಕಿಂತ ಮೊದಲು ನೋಂದಣಿ ಮಾಡಿಕೊಳ್ಳಬೇಕು. ಜುಲೈ 26 ಅಥವಾ 27 ರ ಒಳಗೆ ಅಂತಿಮ ಗಡುವು ನೀಡಲಾಗಿದೆ. ಈ ದಿನಾಂಕದೊಳಗೆ ನೀವು ನೋಂದಣಿ ಮಾಡದಿದ್ದರೆ ಎಂದಿನಂತೆ ರೆಗ್ಯೂಲರ್ ಬಿಲ್ ಬರುತ್ತದೆ. ಆದ್ದರಿಂದ ಜುಲೈ 27 ರೊಳಗೆ ಅರ್ಜಿ ಸಲ್ಲಿಸಿ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.

ಶೀಘ್ರವೇ ಹಾಲಿನ ದರ ಏರಿಕೆ: ಸಚಿವ ವೆಂಕಟೇಶ್

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದ್ದು, ಅರ್ಜಿ ಸ್ವೀಕಾರ ಆರಂಭವಾಗಿದೆ.ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡವರು ತಮ್ಮ ಅರ್ಜಿಯ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಇಂಧನ ಇಲಾಖೆ, ಅಂತರ್ಜಾಲ ಲಿಂಕ್ ಬಿಡುಗಡೆ ಮಾಡಿದ್ದು ಇದರ ಮಾಹಿತಿ ಇಲ್ಲಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/statucTrack/Track_Status ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.