ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಂತಾರಕ್ಕೆ ಸಿಲ್ವರ್ ಪಿಕಾಕ್ ಪ್ರಶಸ್ತಿ
ಗೋವಾ : ಕಾಂತಾರ ಸಿನೆಮಾ ಬಿಡುಗಡೆಯಾಗಿ ಒಂದು ವರ್ಷ ಕಳೆದರೂ ಅದರ ಹವಾ ಮಾತ್ರ ಇನ್ನೂ ಮುಂದುವರೆದಿದೆ. ಈಗಾಗಲೇ ಕಾಂತಾರದ ಅಧ್ಯಾಯ 1 ರ ಮುಹೂರ್ತದ ಬೆನ್ನಲ್ಲೇ ಇದೀಗ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು ಗೋವಾ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಬೆಸ್ಟ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತೀರ್ಪುಗಾರರ ವಿಶೇಷ ಪ್ರಶಸ್ತಿ ಅಥವಾ ‘ಸಿಲ್ವರ್ ಪೀಕಾಕ್’ ಪ್ರಶಸ್ತಿ ಪಡೆದ ಮೊದಲ ಕನ್ನಡ ಸಿನಿಮಾ ಎಂಬ ಖ್ಯಾತಿಗೆ ‘ಕಾಂತಾರ’ ಪಾತ್ರವಾಗಿದೆ. ತೀರ್ಪುಗಾರರ ಗಮನ ಸೆಳೆಯುವುದು ಪ್ರತಿ ವರ್ಷವೂ ವಿಶೇಷ. ಈ ಬಾರಿ ಆ ಗೌರವ ನಿರ್ದೇಶಕ ರಿಷಬ್ ಶೆಟ್ಟಿ ಪಾಲಾಗಿದೆ. ‘ಕಾಂತಾರ’ ಸಿನಿಮಾದಲ್ಲಿ ಅದ್ಭುತ ನಟನೆಗೆ ಹಾಗೂ ಅದ್ಭುತವಾಗಿ ಕತೆ ಹೇಳಿರುವ ರೀತಿಗೆ ರಿಷಬ್ ಶೆಟ್ಟಿ ಅವರಿಗೆ ತೀರ್ಪುಗಾರರ ವಿಶೇಷ ಪ್ರಶಸ್ತಿ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಟ್ವೀಟ್ ಮಾಡಿದೆ.
ಈ ಮೂಲಕ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಈ ಪ್ರಶಸ್ತಿ ಪಡೆದ ಮೊದಲ ಚಿತ್ರ ಎಂಬ ದಾಖಲೆಯನ್ನು ಕಾಂತಾರ ನಿರ್ಮಿಸಿದೆ.