ಗ್ರಾಮ ಒನ್ ಕಚೇರಿಯಲ್ಲಿ ಎಸ್ ಡಿಎ ಆಗಿದ್ದ ಮಹಿಳೆ ಆತ್ಮಹತ್ಯೆ
ಹಾಸನ: ಹಾಸನ ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್ ಡಿಎ ಅಧಿಕಾರಿಯೊಬ್ಬರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಕ್ಷಣಾಪುರಂನಲ್ಲಿನ ತಮ್ಮ ನಿವಾಸದಲ್ಲಿ ಸುಚಿತ್ರಾ (31) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಇವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಎಸ್ ಡಿಎ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.
ಅಪಘಾತದಲ್ಲಿ ಪತಿ ನಿಧನ ಹೊಂದಿದ ನಂತರ ಪತಿಯ ಹುದ್ದೆಯನ್ನು ಪತ್ನಿಗೆ ನೀಡಲಾಗಿತ್ತು. ಇದೀಗ ಇವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಹೇಳಲಾಗಿದೆ.
ಮೂರು ವರ್ಷಗಳ ಹಿಂದೆ ಅಪಘಾತದಲ್ಲಿ ಗಂಡನನ್ನು ಕಳೆದುಕೊಂಡಿದ್ದ ಸುಚಿತ್ರಾ ತನ್ನ ಮಗಳೊಂದಿಗೆ ರಕ್ಷಣಾಪುರಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.