Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚಂದ್ರಬಾಬು ನಾಯ್ಡು ಅರ್ಜಿ ವಿಚಾರಣೆ ಹಿಂದೆ ಸರಿದ ನ್ಯಾಯಾಧೀಶ

ಹೊಸದಿಲ್ಲಿ: ರಾಜ್ಯದ ಕೌಶಲ ಅಭಿವೃದ್ಧಿ ನಿಗಮದಲ್ಲಿ 371 ಕೋಟಿ ರೂ. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ತನ್ನ ವಿರುದ್ಧ ದಾಖಲಿಸಲಾದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ ಮನವಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಸರಸವೆಂಕಟನಾರಾಯಣ ಭಟ್ಟಿ ಹಿಂದೆ ಸರಿದಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಸ್.ವಿ.ಎನ್. ಭಟ್ಟಿ ಅವರನ್ನು ಒಳಗೊಂಡ ನ್ಯಾಯಪೀಠದ ಮುಂದೆ ಪ್ರಕರಣದ ವಿಚಾರಣೆ ಬಂದಾಗ ಎಸ್.ವಿ.ಎನ್. ಭಟ್ಟಿ ಅವರು ಈ ಪ್ರಕರಣದ ವಿಚಾರಣೆ ನಡೆಸಲು ಸ್ಪಲ್ಪ ಕಷ್ಟವಿದೆ.

ಈ ಪ್ರಕರಣವನ್ನು ಮುಂದಿನ ವಾರ ಇನ್ನೊಂದು ಪೀಠದ ಮುಂದೆ ಪಟ್ಟಿ ಮಾಡುವಂತೆ ನಾವು ನಿರ್ದೇಶಿಸುತ್ತೇವೆ ಎಂದರು. ಚಂದ್ರಬಾಬು ನಾಯ್ದು ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಸಿದ್ಧಾರ್ಥ ಲೂಥತುರ್ತು ವಿಚಾರಣೆಗೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಉಲ್ಲೇಖಿಸಲು ಅನುಮತಿ ನೀಡುವಂತೆ ಮನವಿ ಮಾಡಿದರು. ನೀವು ಹಾಗೆ ಮಾಡಬಹುದು ಎಂದು ಪೀಠ ಲೂಥ್ರಾ ಅವರಿಗೆ ತಿಳಿಸಿತು.