Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ ರಸ್ತೆಯಲ್ಲೇ ಮಲಗಿ ಪ್ರತಿಭಟನೆಗೆ – ಪವನ್ ಕಲ್ಯಾಣ್ ಪೊಲೀಸ್ ವಶಕ್ಕೆ

ಆಂಧ್ರಪ್ರದೇಶ: ಆಂಧ್ರಪ್ರದೇಶ ಪೊಲೀಸರು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಮತ್ತು ಅದರ ಹಿರಿಯ ನಾಯಕ ನಾದೆಂಡ್ಲಾ ಮನೋಹರ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪವನ್ ಕಲ್ಯಾಣ್ ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಪವನ್ ಕಲ್ಯಾಣ್ ಅವರು ಶನಿವಾರ ನಂದ್ಯಾಲದಲ್ಲಿ ನಡೆದ ಮುಂಜಾನೆ ಕಾರ್ಯಾಚರಣೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಖಂಡಿಸಿ ನಾಯ್ಡು ಅವರನ್ನು ಬೆಂಬಲಿಸಲು ವಿಜಯವಾಡಕ್ಕೆ ವಿಶೇಷ ವಿಮಾನದ ಮೂಲಕ ತೆರಳಲು ಸಿದ್ಧತೆಯಲ್ಲಿದ್ದ ಪವನ್ ಕಲ್ಯಾಣ್ ಅವರ ವಿಮಾನಯಾನವನ್ನು ತಪ್ಪಿಸುವಲ್ಲಿ ಪೊಲೀಸರು ಯಶಸ್ವಿಯಾದರು ಬಳಿಕ ರಸ್ತೆ ಮಾರ್ಗವಾಗಿ ಸಂಚರಿಸಲು ನಿರ್ಧರಿಸಿದ್ದರು ಎನ್ನಲಾಗಿದೆ.

ಶನಿವಾರದಂದು ಎರಡು ಬಾರಿ ಎನ್‌ಟಿಆರ್ ಜಿಲ್ಲೆಯಲ್ಲಿ ಪವನ್ ಕಲ್ಯಾಣ್ ಅವರ ಬೆಂಗಾವಲು ವಾಹನವನ್ನು ತಡೆಹಿಡಿಯಲಾಯಿತು ಈ ವೇಳೆ ರಸ್ತೆಯಲ್ಲೇ ಮಲಗಿ ಪ್ರತಿಭಟನೆಗೆ ಮುಂದಾದ ಪವನ್ ಕಲ್ಯಾಣ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.