ಚಂದ್ರಯಾನ-3: ಭಾರತದ ಮೂರನೇ ಚಂದ್ರಯಾನಕ್ಕೆ ಕ್ಷಣಗಣನೆ ಆರಂಭ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊ ವಿಜ್ಞಾನಿಗಳು ಭಾರತದ ಬಹು ನಿರೀಕ್ಷಿತ ಚಂದ್ರಯಾನ-3 ಉಡಾವಣೆಗೆ ಸಜ್ಜಾಗಿದ್ದಾರೆ. ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಭಾರತೀಯ ಕಾಲಮಾನ ಇಂದು ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಹಾರಲಿದೆ. 2019ರಲ್ಲಿ ಚಂದ್ರಯಾನ 2 ಹೆಸರಿನಲ್ಲಿ ಮತ್ತೊಂದು ಪ್ರಯೋಗ ಮಾಡಲಾಗಿತ್ತು. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಬೇಕಿದ್ದ ‘ಚಂದ್ರಯಾನ-2’ರ ವಿಕ್ರಮ್‌ ಲ್ಯಾಂಡರ್‌ ಸಾಫ್ಟ್‌ ಲ್ಯಾಂಡಿಂಗ್‌ ಸಾಧ್ಯವಾಗದೇ ಅಪ್ಪಳಿಸಿ, ವೈಫಲ್ಯ ಕಂಡಿತ್ತು. ಅದರ ಮುಂದುವರಿದ ಭಾಗವಾಗಿರುವ ಚಂದ್ರಯಾನ-3 ಉಪಗ್ರಹ ಎಲ್ … Continue reading ಚಂದ್ರಯಾನ-3: ಭಾರತದ ಮೂರನೇ ಚಂದ್ರಯಾನಕ್ಕೆ ಕ್ಷಣಗಣನೆ ಆರಂಭ