ಚರ್ಮಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
ಚಿತ್ರದುರ್ಗ: ಡಾ. ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳಿಗೆ ಕಡ್ಡಾಯವಾಗಿ ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಚರ್ಮಕುಶಲಕರ್ಮಿಗಳಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 19 ಅರ್ಜಿ ಸಲ್ಲಿಸಲು ಕೊನೆ ದಿನ.
ನಿಗಮದ ಯೋಜನೆಗಳಾದ ತರಬೇತಿ ಯೋಜನೆ, ಸ್ವಯಂ ಉದ್ಯೋಗ ಯೋಜನೆ, ಡಾ.ಬಾಬು ಜಗಜೀವನ ರಾಂ ವಸತಿ ಕಾರ್ಯಾಗಾರ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ .
ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in ಮೂಲಕ ಗ್ರಾಮಒನ್ ಅಥವಾ ಕರ್ನಾಟಕ ಒನ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಲಿಡ್ಕರ್ ಜಿಲ್ಲಾ ಸಂಯೋಜಕರ ದೂರವಾಣಿ ಸಂಖ್ಯೆ 9480886266 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.