ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟ- ಮೂವರು ಮೃತ್ಯು
![](https://suddimane.com/wp-content/uploads/2023/09/WhatsApp-Image-2023-09-18-at-10.51.26-AM.jpeg)
ಬೆಂಗಳೂರು:ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ.
ಕಾರು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರಿನ ಚಕ್ರ ಬ್ಲಾಸ್ಟ್ ಆದ ಪರಿಣಾಮ ಅಪಘಾತ ಸಂಭವಿಸಿ ಕಾರು ನಜ್ಜುಗುಜ್ಜಾಗಿದೆ. ಮೃತರನ್ನು ಅಗಸ್ಟಿನ್, ದಾರಾರೆಡ್ಡಿ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ.
ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.