ಚಿತ್ರದುರ್ಗದಲ್ಲಿ ಈ ಹಿಂದೆ ಎಸ್.ಪಿ ಆಗಿ ಕಾರ್ಯನಿರ್ವಹಿಸಿದ್ದ ಅರುಣ್ ರಂಗರಾಜನ್ ಬಂಧನ ಬಿಡುಗಡೆ.!
ಕಲಬುರಗಿ: ಮಹಿಳಾ ಪೊಲೀಸ್ ಸಿಬ್ಬಂದಿ ಜೊತೆಗೆ ಕರ್ನಾಟಕದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಕಿರಿಕ್ ಮಾಡಿಕೊಂಡಿದ್ದು,ತಮಿಳುನಾಡಿನ ಗೋಬಿ ಪೊಲೀಸ್ ಠಾಣೆಯಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಜಿಲ್ಲೆಯ ಮಹಿಳಾ ಪೊಲೀಸ್ ಒಬ್ಬರು ದೂರು ದಾಖಲು ಮಾಡಿದ್ದರಿಂದ ಐಪಿಎಸ್ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದ ಅರುಣ್ ರಂಗರಾಜನ್ ಬಂಧಿತ ಅಧಿಕಾರಿ ಎಂದು ಹೇಳಲಾಗುತ್ತಿದ್ದು, ದೂರು ನೀಡಿದ ಮಹಿಳೆ ಚಿಂಚೋಳಿ ತಾಲೂಕಿನ ಪೊಲೀಸ್ ಠಾಣೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. ಕೆಲವು ದಿನಗಳ ಹಿಂದೆ ಈ ಮಹಿಳೆ ಜತೆ ಐಪಿಎಸ್ ಅಧಿಕಾರಿ ಅರುಣ ರಂಗರಾಜನ್ ತಮಿ ಳುನಾಡಿನ ತಿರುಚ್ಚಿಗೆ ತೆರಳಿದ್ದರು. ಈ ವೇಳೆ ಅವರಿಬ್ಬರ ಮಧ್ಯೆ ಜಗಳವಾಗಿದೆ. ಸ್ಥಳೀಯ ಪೊಲೀಸರು ರಾಜಿ ಮಾಡಿ ಕಳಿಸಿದ್ದರು.
ಕಲಬುರಗಿ ಮಹಿಳಾ ಪೊಲೀಸ್ ದೂರು ಬಳಿಕ ಅರುಣ್ ಅವರು ತಮ್ಮ ಹುಟ್ಟೂರು ತಿರುಚ್ಚಿಯ ಶ್ರೀರಂಗಂಗೆ ತಮ್ಮನ್ನು ಕರೆದೊಯ್ದಿದ್ದು, ಹಲ್ಲೆ ನಡೆಸಿದ್ದಾರೆ ಎಂದ ಮಹಿಳೆ ಗೋಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರನ್ವಯ ಅರುಣ್ ಅವರನ್ನು ಬಂಧಿಸಲಾಗಿತ್ತು.
ಕಲಬುರಗಿಯಲ್ಲಿ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ತಮ್ಮ ಪತ್ನಿಯನ್ನು ಅಕ್ರಮವಾಗಿ ಬಂಧನಲ್ಲಿಟ್ಟುಕೊಂಡು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಹಿಳೆಯ ಪತಿ 2023 ಮಾರ್ಚ್ ದೂರು ದಾಖಲು ಮಾಡಿದ್ದರು. ಈ ಕುರಿತು ಸ್ಟೇಷನ್ ಬಜಾರ್ ಠಾಣೆಯ ಪಿಐ ಚಾರ್ಜಶೀಟ್ ಸಲ್ಲಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.