Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚಿತ್ರದುರ್ಗದ ಸುತ್ತಾ ಈ ಹಳ್ಳಿಗಳಲ್ಲಿ ಸೆ.12ರಂದು ವಿದ್ಯುತ್ ವ್ಯತ್ಯಯ

 

ಚಿತ್ರದುರ್ಗ: 220 ಕೆ.ವಿ.ಎ ಎಸ್.ಆರ್.ಎಸ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದವರು ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ. ಚಿತ್ರದುರ್ಗ, 66/11 ಕೆ.ವಿ. ಚಿತ್ರದುರ್ಗದ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ. ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಸೆಪ್ಟೆಂಬರ್ 12ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಹಿರೇಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾಡನಾಯಕನಹಳ್ಳಿ, ಚಿಕ್ಕಜಾಜೂರು, ಹೆಚ್.ಡಿ ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ತುರುವನೂರು, ಜೆ.ಎನ್.ಕೋಟೆ, ಮಲ್ಲಾಡಿಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.