ಚಿತ್ರದುರ್ಗ – ಭೀಕರ ರಸ್ತೆ ಅಪಘಾತಕ್ಕೆ ಮೂವರು ಪುಟಾಣಿ ಮಕ್ಕಳು ಸೇರಿದಂತೆ ನಾಲ್ವರ ಸಾವು
ಚಿತ್ರದುರ್ಗ :ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸೇತುವೆಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ.
ಮೃತರನ್ನು ಲಿಂಗಪ್ಪ (26), ಸಿಂಧುಶ್ರೀ (2), ಐದು ತಿಂಗಳ ಅಯ್ಯಳಪ್ಪ ಹಾಗೂ ಮೂರು ತಿಂಗಳ ರಕ್ಷಾ ಎಂದು ಗುರುತಿಸಲಾಗಿದೆ. ಯಲ್ಲಮ್ಮ (30), ಮಲ್ಲಮ್ಮ (20) ಹಾಗೂ ನಾಗಪ್ಪ (35) ಗಂಭೀರವಾಗಿ ಗಾಯಗೊಂಡಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ದಂಡಮ್ಮನಹಳ್ಳಿ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.