Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚಿನ್ನದ ಪದಕ ಗೆದ್ದ ಭಾರತದ ಮಹಿಳಾ ತಂಡ

ಹ್ಯಾಂಗ್ ಝೂ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮತ್ತೊಂದು ಚಿನ್ನ ಭಾರತದ ಪಾಲಾಗಿದ್ದು, ಮಹಿಳಾ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ.

ಫೈನಲ್ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದು ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಫಾಲಿ ವರ್ಮಾ ಕೇವಲ 9 ರನ್​ಗಳಿಸಿ ನಿರ್ಗಮಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಸ್ಮೃತಿ ಮಂಧಾನ ಹಾಗೂ ಜೆಮಿಮಾ ರೋಡ್ರಿಗಸ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು.

ಇನ್ನು ಭಾರತವು 20 ಓವರ್ ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 116 ರನ್ ಗಳಿಸಿದ್ದು, ಇದನ್ನು ಬೆನ್ನತ್ತಿದ ಶ್ರೀಲಂಕಾ ಎಂಟು ವಿಕೆಟ್ ನಷ್ಟಕ್ಕೆ 97 ರನ್ ಗಳಿಸಿ ಭಾರತದ ವಿರುದ್ದ ಸೋತಿದೆ.