Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚೀನಾಕ್ಕೆ ಸೆಡ್ಡು: ವಿವಾದಿತ ಗಡಿಯಲ್ಲಿ ಏರ್‌ಫಿಲ್ಡ್ ನಿರ್ಮಾಣಕ್ಕೆ ಸಜ್ಜಾದ ಭಾರತ

ನವದೆಹಲಿ: ಚೀನಾ ಹಾಗೂ ಭಾರತದ ಗಡಿ ಭಾಗದ ಪೂರ್ವ ಲಡಾಖ್‍ನ ನ್ಯೋಮಾ ಬೆಲ್ಟ್‌ನಲ್ಲಿ 218 ಕೋಟಿ ರೂ. ವೆಚ್ಚದಲ್ಲಿ ಏರ್‌ಫಿಲ್ಡ್ ನಿರ್ಮಿಸಲು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಸಜ್ಜಾಗಿದೆ. ಸೆಪ್ಟೆಂಬರ್ 12 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶಂಕುಸ್ಥಾಪನೆ ಮಾಡಲಿದ್ದಾರೆ. ಇದರ ಜೊತೆಗೆ 2,941 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳನ್ನು ರಾಜನಾಥ್‌ ಸಿಂಗ್ ಉದ್ಘಾಟಿಸಲಿದ್ದಾರೆ.

ಸೇನಾ ಚಾಪರ್‌ಗಳು ಮತ್ತು ವಿಶೇಷ ಕಾರ್ಯಾಚರಣೆಯ ವಿಮಾನಗಳನ್ನು ಲ್ಯಾಂಡ್ ಮಾಡಲು ಅನುಕೂಲವಾಗುವಂತೆ ಈ ಏರ್‌ಫಿಲ್ಡ್ ನಿರ್ಮಾಣ ಮಾಡಲಾಗುತ್ತದೆ. ಅಲ್ಲದೇ ಚೀನಾದೊಂದಿಗೆ ಇರುವ ಗಡಿ ವಿವಾದಗಳಿಂದ ಈ ಯೋಜನೆ ಮಹತ್ವ ಪಡೆದಿದೆ.

ಈ ಯೋಜನೆಗಳಿಂದ ಉತ್ತರದ ಗಡಿಗಳಲ್ಲಿನ ಸಮಸ್ಯೆಗಳನ್ನು ಎದುರಿಸಲು ಸಹಕಾರಿಯಾಗುವುದರ ಜೊತೆಗೆ ವಾಣಿಜ್ಯ ಉದ್ದೇಶಕ್ಕೂ ಬಳಸಬಹುದಾಗಿದೆ. ಈ ನಿಟ್ಟಿನಲ್ಲಿ ಭಾರತದ ಗಡಿ ಪ್ರದೇಶಗಳಲ್ಲಿನ ನೆರೆಯ ದೇಶಗಳೊಂದಿಗೆ ಸ್ನೇಹ ಸಂಬಂಧಕ್ಕಾಗಿ ರಸ್ತೆ ಜಾಲಗಳನ್ನು ಅಭಿವೃದ್ಧಿ ಪಡೆಸುವ ಉದ್ದೇಶ ಸಹ ಇದರಲ್ಲಿ ಕೂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ಭಾರತದ ಭಾಗಗಳನ್ನು ಸೇರಿಸಿ ಚೀನಾ ಮ್ಯಾಪ್ ಬಿಡುಗಡೆ ಮಾಡಿತ್ತು. ಇದರಲ್ಲಿ ಅರುಣಾಚಲ ಪ್ರದೇಶವನ್ನು ದಕ್ಷಿಣ ಚೀನಾ ಎಂದು ಹೇಳಿಕೊಂಡಿತ್ತು. ಇದರ ಬೆನ್ನಲ್ಲೆ ಭಾರತ ದಿಟ್ಟ ಹೆಜ್ಜೆ ಇಡುವ ಮೂಲಕ ಈ ಯೋಜನೆ ಚೀನಾಕ್ಕೆ ಸೆಡ್ಡು ಹೊಡೆಯಲಿದೆ.