Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚೀನಾದಲ್ಲಿ ಅಗ್ನಿ ದುರಂತ..39 ಮಂದಿ ಸಾವು

 

ಚೀನಾ:  ಜಿಯಾಂಗ್ಲಿ ಪ್ರಾಂತ್ಯದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಜಿನ್ಯು ನಗರದ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 39 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಇತರ 9 ಮಂದಿ ಗಾಯಗೊಂಡಿದ್ದಾರೆ. ಸೂಕ್ತ ಸುರಕ್ಷತಾ ವ್ಯವಸ್ಥೆ ಇಲ್ಲದಿರುವುದೇ ಈ ಘಟನೆಗೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದ್ದು, ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.