Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು

ಮಾಗಡಿ: ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ಚುನಾವಣಾಧಿಕಾರಿ ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್ ಕಳ್ಳತನ ಮಾಡಲಾಗಿದೆ.

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ತಿಪ್ಪಸಂದ್ರ ಹೋಬಳಿಯ ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಹಾಲು ಉತ್ಪಾದಕ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಚುನಾವಣೆಗಾಗಿ ಕಾರಿನಲ್ಲಿ ಹೋಗ್ತಿದ್ದ ವೇಳೆ ಚುನಾವಣಾಧಿಕಾರಿಗಳಾದ ಉಮೇಶ್, ಉಷಾ ಎಂಬವರಿಗೆ ಮಾರಕಾಸ್ತ್ರ ತೋರಿ ನಾಮಪತ್ರ ಲ್ಯಾಪ್ ಟ್ಯಾಪ್ ಹಾಗೂ ಇತರೆ ದಾಖಲೆಗಳನ್ನು ಕಸಿದು ಕಾರಿನಲ್ಲಿ ಪರಾರಿಯಾಗಿರುವ ಘಟನೆ ನಡೆದಿದೆ.

ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರಿಂದ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.ಕುದೂರು ಹಾಗೂ ಮಾಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.