Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಚುನಾವಣೆ ಕಾರಣ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ’ -ಕೇಂದ್ರ ಸರ್ಕಾರಕ್ಕೆ ಸಿಎಂ ತಿರುಗೇಟು

ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಅವರು ಇಂದು ಮಧುಗಿರಿಯಲ್ಲಿ ಭಾರತ ಹೆಸರು ಬದಲಾವಣೆ ವಿಚಾರ ಮಾಧ್ಯಮದವರೊಂದಿಗೆ ಮಾತನಾಡಿ,ದೇಶದ ಸಂವಿಧಾನವನ್ನು 26 ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದರು.

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.

ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಮ್, ಕ್ರೈಸ್ತ, ಸಿಖ್, ಭೌದ್ಧ,ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಎಂದರು.