Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚೈತ್ರಾ ಕುಂದಾಪುರ ಬೆಂಬಲಕ್ಕೆ ನಾವು ನಿಂತಿಲ್ಲ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ : ಬಹುಕೋಟಿ ವಂಚನೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ಳ ಬೆಂಬಲಕ್ಕೆ ನಾವು ಯಾರೂ ನಿಂತಿಲ್ಲ. ಯಾರೂ ಅವಳ ರಕ್ಷಣೆ ಮಾಡುತ್ತಿಲ್ಲ ಎಂದರು. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ, ಚೈತ್ರ ಕುಂದಾಪುರ ನನಗೂ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ, ಆದರೆ ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು
ಗೊತ್ತಿಲ್ಲ ಎಂದ ಅವರು ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರು ಶಿಕ್ಷೆ ಆಗಬೇಕು, ಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಲಿ ಎಂದರು. ಉಪ್ಪು ತಿಂದವರು ನೀರು ಕುಡಿಯುತ್ತಾರೆ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ . ಹಾಗೆ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ನನಗೆ ಚೈತ್ರ ಫೋನ್ ಮಾಡ್ಲಿಲ್ಲ ನಾನು ಕೂಡ ಅವಳಿಗೆ ಫೋನ್ ಮಾಡಿದ್ದು ಇಲ್ಲ.

ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಈ ಬಾರಿ ಲೋಕಸಭಾ ಟಿಕೆಟ್ ನನಗೆ ಟಿಕೆಟ್ ಸಿಗುತ್ತದೆ ಅಂತ ಹೇಳುತ್ತಿದ್ದ ಚೈತ್ರಾಕುಂದಾಪುರ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಯಾರಿಗೆ ಟಿಕೆಟ್ ಕೊಡಬೇಕು ಎಲ್ಲಿ ಟಿಕೆಟ್ ಕೊಡಬೇಕು ಅನ್ನೋದು ವರಿಷ್ಠರು ತೀರ್ಮಾನ ಮಾಡುತ್ತಾರೆ. ಭಾರತೀಯ ಜನತಾ ಪಾರ್ಟಿಗೆ ಗಟ್ಟಿಮುಟ್ಟಾದ ನೇತೃತ್ವ ಇದೆ . ನರೇಂದ್ರ ಮೋದಿ ಅಮಿತ್ ಶಾ, ನಡ್ಡ ಲೋಕಸಭೆಗೆ ಯಾರಿಗೆ ಟಿಕೆಟ್ ನೀಡಬೇಕು ಅಂತ ತೀರ್ಮಾನ ಮಾಡುತ್ತಾರೆ .

ಸ್ಪರ್ಧೆ ಮಾಡುತ್ತೇನೆ ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡ್ರು ಅದಕ್ಕೆ ಬೆಲೆ ಇರುವುದಿಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಲ್ಲಿ ಸ್ಪರ್ಧೆ ಮಾಡಬೇಕು ಅಂತ, ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡರೆ ಕ್ರಮ ಕೈಗೊಳ್ಳಬೇಕು ಉಡುಪಿಯಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರ ದುರುಪಯೋಗ ಮಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಯಾರು ಡೆಲ್ಲಿ ನಾಯಕರ, ರಾಜ್ಯನಾಯಕರ ಹೆಸರು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಲಿಂಕ್‌ ತನಿಖೆ ಆಗಬೇಕು, ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ, ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿಯು ಇಲ್ಲ, ಮುಂದೆ ಬರುವುದೂ ಇಲ್ಲ, ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.