Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಆರೋಪಿಗಳ ಬ್ಯಾಂಕ್ ಖಾತೆ ಸ್ಥಗಿತ ಸೊತ್ತುಗಳು ಮುಟ್ಟುಗೋಲು..!

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿಗಳ ಆಸ್ತಿ ಕುರಿತು ಶೋಧವನ್ನು ಸಿಸಿಬಿ ಮುಂದುವರೆಸಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿಗಳ ಆಸ್ತಿ ಕುರಿತು ಶೋಧವನ್ನು ಸಿಸಿಬಿ ಮುಂದುವರೆಸಿದೆ.

ಆರೋಪಿಗಳ ಬ್ಯಾಂಕ್‌ ಖಾತೆಯಲ್ಲಿದ್ದ ಠೇವಣಿ ಹಾಗೂ ಕಾರನ್ನು ಸಿಸಿಬಿ ಜಪ್ತಿ ಮಾಡಿದೆ.

ಇದುವರೆಗೆ 81 ಲಕ್ಷ ನಗದು, ಎಫ್.ಡಿ ಖಾತೆಯಲ್ಲಿ ಒಟ್ಟು 1.08 ಕೋಟಿ ಠೇವಣಿ, ಮತ್ತಿತರ ಬ್ಯಾಂಕ್‌ಗಳ ಮೂಲಕ ಠೇವಣಿಗಳ ವ್ಯವಹಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೂರುದಾರ ಗೋವಿಂದ ಬಾಬು ಪೂಜಾರಿ ಅವರಿಂದ ಪಡೆದಿದ್ದ 3.50 ಕೋಟಿ ರೂಪಾಯಿ ಹಣವನ್ನು ಚೈತ್ರಾ ಕುಂದಾಪುರ, ಶ್ರೀಕಾಂತ್ ಮತ್ತಿತರ ಆರೋಪಿಗಳು ಹಂಚಿಕೊಂಡಿದ್ದರು. ಹಣವನ್ನು ಆರೋಪಿಗಳು ಹಲವೆಡೆ ಹೂಡಿಕೆ ಮಾಡಿದ್ದರು.

ಹೀಗಾಗಿ, ಅವರ ಖಾತೆಗಳಿರುವ ಬಾಗಲಕೋಟೆ, ಕುಂದಾಪುರ ಹಾಗೂ ಇತರೆಡೆಯ ಬ್ಯಾಂಕ್‌ಗಳಲ್ಲಿ ಭಾನುವಾರ ಶೋಧ ನಡೆದಿತ್ತು.

ವಂಚನೆ ಹಣದಲ್ಲಿ ಆರೋಪಿಗಳು 12 ಲಕ್ಷ ರೂ ಮೌಲ್ಯದ ಕಿಯಾ ಕಾರು ಖರೀದಿ

ಪ್ರಕರಣ ದಾಖಲಾಗುತ್ತಿದ್ದಂತೆ, ಸೊಲ್ಲಾಪುರದ ಬಾರ್‌ವೊಂದರ ಎದುರು ಕಾರು ನಿಲ್ಲಿಸಲಾಗಿತ್ತು. ಚೈತ್ರಾ ಸ್ನೇಹಿತ ಬಾಗಲಕೋಟೆ ಮೂಲದ ಕಿರಣ್, ಕಾರು ತೆಗೆದುಕೊಂಡು ಬಂದು ತಮ್ಮ ಮನೆಯಲ್ಲಿ ಇಟ್ಟುಕೊಂಡಿದ್ದರು.