‘ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ವಾಪಸ್ ಕರೆಸಿಕೊಳ್ಳುವುದಕ್ಕೆ ಯತ್ನಿಸುತ್ತಿದೆ’ : ಡಿಕೆಶಿ
ಮೈಸೂರು: ಇತ್ತೀಚಿಗೆ ಜಿಜೆಪಿ ಸರ್ಕಾರವು ಮಾಜಿ ಸಿ ಎಂ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಯತ್ನಿಸುತ್ತಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮೈಸೂರಿನ ಬಯಲುಕುಪ್ಪೆಯಲ್ಲಿ ಮಾತನಾಡಿದ ಅವರು ಆರ್ ಎಸ್ಎಸ್ ನಲ್ಲಿ ಗುರುತಿಸಿಕೊಂಡಿದ್ದ, ಬಿಜೆಪಿ ನಾಯಕರಾಗಿದ್ದ ಜಗದೀಶ್ ಶೆಟ್ಟರ್ 2023 ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸೇರಿದ್ದರು. ಈಗ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಪಕ್ಷಕ್ಕೆ ಕರೆದುಕೊಳ್ಳಲು ಹಲವು ಬಿಜೆಪಿ ನಾಯಕರು ಹತಾಶ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿಯನ್ನು ದೂರವಿಡಲು ಹೆಚ್ ಡಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿದ್ದೆವು, ಈಗ ಕುಮಾರಸ್ವಾಮಿಯವರು ತಮ್ಮ ಸರ್ಕಾರವನ್ನು ಬೀಳಿಸಿದವರನ್ನೇ ಅಪ್ಪಿಕೊಳ್ಳುತ್ತಿದ್ದಾರೆ. ಈ ಅಪವಿತ್ರ ಮೈತ್ರಿ ಎರಡು ಪಕ್ಷಗಳ ಸ್ಥಿತಿಗತಿಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಅವರು ಹೇಳಿದರು.