Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪೋಸ್ಟ್‌ ಗಳ ಮೇಲೆ ತೀವ್ರ ನಿಗಾ

ಮಂಗಳೂರು: ಸಾಮಾಜಿಕ ಜಾಲತಾಣದ ವಾಟ್ಸಪ್, ಫೇಸ್ಬುಕ್, ಇನ್ಸಾ ಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್ಗಳಲ್ಲಿ ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಒಳಗೊಂಡ ಸಂದೇಶಗಳು ಹರಿದಾಡುತ್ತಿರುವುದು ಕಂಡು ಬರುತ್ತಿದೆ. ಇಂತಹ ಸಂದೇಶಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ 21 ಪ್ರಕರಣಗಳು ದಾಖಲಾಗಿದ್ದು ತನಿಖೆಯಲ್ಲಿರುತ್ತದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ಹಾಗೂ ಸೋಷಿಯಲ್ ಮೀಡಿಯಾ ಸೆಲ್ನಲ್ಲಿ ಧರ್ಮದ ವಿಚಾರವಾಗಿ ಪರ ಮತ್ತು ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ನಿಗಾ ವಹಿಸುತ್ತಿದ್ದು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಹಾಗೂ ಇದೇ ರೀತಿಯಲ್ಲಿ ಅಪರಾಧಗಳನ್ನು ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಆರ್ ಜೈನ್ ಎಚ್ಚರಿಕೆ ನೀಡಿದ್ದಾರೆ