ಜಿಲ್ಲಾ ನ್ಯಾಯಾಲಯದಲ್ಲಿ 31 ಜವಾನ ಹುದ್ದೆಗಳಿಗೆ SSLC ಪಾಸಾದವರು ಅರ್ಜಿ ಸಲ್ಲಿಸಬಹುದು !
ಬಳ್ಳಾರಿ: ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ 31 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಟ 18ರಿಂದ 35 ವರ್ಷದೊಳಗಿನ ಅರ್ಹ SSLC ಪಾಸಾದ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಕಟಿಸಿದೆ. ಜನವರಿ 4ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000 ರಿಂದ 28,950 ವೇತನ ನೀಡಲಾಗುತ್ತದೆ