Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಿಲ್ಲೆಯ ಪ್ರಸಿದ್ಧ ಗೌರಸಮುದ್ರ ಜಾತ್ರೆ 18 ರಿಂದ ಪ್ರಾರಂಭ

 

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಗ್ರಾಮದ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಯು ಇದೇ ಸೆಪ್ಟೆಂಬರ್ 18 ರಿಂದ 20 ರವರೆಗೆ ನಡೆಯಲಿದ್ದು, ಈ ಜಾತ್ರೆಗೆ ಲಕ್ಷಾಂತರ ಜನ ಭಕ್ತಾದಿಗಳು ಆಗಮಿಸಲಿದ್ದಾರೆ.

ಜಾತ್ರೆಗೆ ಬರುವ ಭಕ್ತಾದಿಗಳು ಜಾತ್ರೆಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ಮಾಡಬಾರದು ಹಾಗೂ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ಆಡಬಾರದೆಂದು ಸಾರ್ವಜನಿಕರಿಗೆ ತಿಳಿಯಪಡಿಸಿದೆ. ಪ್ರಾಣಿಬಲಿ, ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟವಾಡಿದ ಪಕ್ಷದಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.