Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಿ20 ಔತಣಕೂಟಕ್ಕೆ ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ಅಹ್ವಾನಿಸಿಲ್ಲ- ರಾಹುಲ್‌ ಕಿಡಿ

ಹೊಸದಿಲ್ಲಿ: ವಿಶ್ವ ನಾಯಕರ ಜಿ20 ಔತಣಕೂಟಕ್ಕೆ ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಮಂತ್ರಣ ನೀಡಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬ್ರಸೆಲ್ಸ್ ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮಗಳೊಂದಿಗೆ ಸಂವಾದ ನಡೆಸಿ, ‘ಔತಣಕೂಟಕ್ಕೆ ಖರ್ಗೆ ಅವರನ್ನು ಆಹ್ವಾನಿಸಲಾಗಿಲ್ಲ. ಭಾರತದ ಜನಸಂಖ್ಯೆಯ 60 ಪ್ರತಿಶತದಷ್ಟು ನಾಯಕರಿಗೆ ಸರಕಾರ ಬೆಲೆ ನೀಡುವುದಿಲ್ಲ.ಸರಕಾರದ ಕ್ರಮವು ಅದರ ಚಿಂತನೆಯ ಬಗ್ಗೆ ಹೇಳುತ್ತದೆ. ಜನರು ಇದರ ಹಿಂದೆ ಯಾವ ರೀತಿಯ ಆಲೋಚನೆ ಇದೆ ಎಂಬುದರ ಕುರಿತು ಯೋಚಿಸಬೇಕು” ಎಂದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವ ನಾಯಕರ ಜಿ20 ಶೃಂಗಸಭೆಯ ಸ್ಥಳ ಭಾರತ್ ಮಂಟಪದಲ್ಲಿ ಶನಿವಾರ ಔತಣಕೂಟವನ್ನು ಆಯೋಜಿಸಲಿದ್ದಾರೆ.