‘ಜ.22 ರ ಬಳಿಕ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ’ – ಅಖಿಲೇಶ್ ಯಾದವ್
ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ಹೈಕಮಾಂಡ್ ನಿರಾಕರಿದ್ದು, ಜನವರಿ 22ರ ಕಾರ್ಯಕ್ರಮದ ಬಳಿಕ ತಮ್ಮ ಕುಟುಂಬದೊಂದಿಗೆ ಅಯೋಧ್ಯೆಗೆ ಭೇಟಿ ನೀಡುವುದಾಗಿಯು ಅಖಿಲೇಶ್ ಯಾದವ್ ತಿಳಿಸಿದ್ದಾರೆ.
ಈ ಕುರಿತಾಗಿ ಅಖಿಲೇಶ್ ಅವರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಪತ್ರವನ್ನು ಬರೆದಿದ್ದು, ಇದರಲ್ಲಿ ಕಾರ್ಯಕ್ರಮದ ನಂತರ ಬರುವುದಾಗಿ ಹೇಳಿದ್ದಾರೆ.
ಇನ್ನು ಆಹ್ವಾನ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಕೂಡ ಅಲ್ಲಿಸಿದ್ದು, ಇದರೊಂದಿಗೆ ಈ ಕಾರ್ಯಕ್ರಮವನ್ನು ಸುರಕ್ಷಿತವಾಗಿ ಪೂರ್ಣಗೊಳಿಸಬೇಕು. ಜನವರಿ 22 ರ ಕಾರ್ಯಕ್ರಮದ ಬಳಿಕ ತಮ್ಮ ಕುಟುಂಬದೊಂದಿಗೆ ಅಯೋಧ್ಯೆಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.